ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಎದುರು ಅಭ್ಯರ್ಥಿಗಳು ಹಾಜರು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 21:24 IST
Last Updated 20 ಏಪ್ರಿಲ್ 2022, 21:24 IST

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರಿರುವ 50 ಅಭ್ಯರ್ಥಿಗಳು ಸಿಐಡಿ ಅಧಿಕಾರಿಗಳ ಎದುರು ಬುಧವಾರ ಹಾಜರಾದರು.

ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿ ಗಳು, ವಿಚಾರಣೆಗೆ ಬರುವಂತೆ ಅಭ್ಯರ್ಥಿಗಳಿಗೆ ಸೂಚಿಸಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳ ನಿವಾಸಿಗಳಾಗಿರುವ ಅಭ್ಯರ್ಥಿಗಳು ನಗರದ ಕಾರ್ಲಟನ್‌ ಕಟ್ಟಡದಲ್ಲಿರುವ ಸಿಐಡಿ ಕಚೇರಿಗೆ ಹಾಜರಾದರು. ಬೆಳಿಗ್ಗೆ 10 ಗಂಟೆಯಿಂದ ಸಂಜೆಯವರೆಗೂ ಅಭ್ಯರ್ಥಿಗಳ ವಿಚಾರಣೆ ನಡೆಯಿತು.

ADVERTISEMENT

ಮಧ್ಯಾಹ್ನ 1 ಗಂಟೆ ಸುಮಾರಿಗೆ 45 ಅಭ್ಯರ್ಥಿಗಳು ಮಾತ್ರ ವಿಚಾರಣೆಗೆ ಬಂದಿದ್ದರು. ಉಳಿದ ಐವರು ಗೈರಾ ಗಬಹುದೆಂದು ಅಧಿಕಾರಿಗಳು ಭಾವಿಸಿ ದ್ದರು. ಆದರೆ, ಐವರು ತಡವಾಗಿ ಕಚೇ ರಿಗೆ ಬಂದು ದಾಖಲೆ ಹಾಜರುಪಡಿಸಿದರು. ಇಬ್ಬರು ಪ್ರವೇಶ ಪತ್ರ ಕಳೆದುಕೊಂಡಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆಂದು ಗೊತ್ತಾಗಿದೆ.

‘ಅಭ್ಯರ್ಥಿಗಳ ಪ್ರವೇಶ ಪತ್ರ ಹಾಗೂ ಓಎಂಆರ್ ಕಾರ್ಬನ್ ಪ್ರತಿಗಳನ್ನು ಪರಿಶೀಲಿಸಲಾಗಿದೆ. ಅಗತ್ಯವಾದ ಹೇಳಿಕೆ ಪಡೆಯಲಾಗಿದೆ. ಎಲ್ಲ ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಿಕೊಳ್ಳ ಲಾಗಿದೆ. ಅಗತ್ಯಬಿದ್ದರೆ ಮತ್ತೊಮ್ಮೆ ವಿಚಾ ರಣೆಗೆ ಕರೆಯಿಸುವುದಾಗಿ ಹೇಳಿ ಅಭ್ಯರ್ಥಿಗಳನ್ನು ವಾಪಸು ಕಳುಹಿಸಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

ಪರೀಕ್ಷಾ ಕೇಂದ್ರಗಳ ಮಾಹಿತಿ ಸಂಗ್ರಹ

ಪಿಎಸ್‌ಐ ಲಿಖಿತ ಪರೀಕ್ಷೆಗಳು ನಡೆದಿದ್ದ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಪರೀಕ್ಷೆಯಲ್ಲಿ ಕೆಲಸ ಮಾಡಿದ್ದ ಸಿಬ್ಬಂದಿ ವಿವರ ಕಲೆಹಾಕುತ್ತಿದ್ದಾರೆ.

‘ಪರೀಕ್ಷಾ ಕೇಂದ್ರಗಳಲ್ಲೇ ಅಭ್ಯರ್ಥಿಗಳು ಅಕ್ರಮ ಎಸಗಿರುವ ಅನುಮಾನ ದಟ್ಟವಾಗಿದೆ. ಹೀಗಾಗಿ, ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರತ್ಯೇಕ ತಂಡ ರಚಿಸಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

ಮಾಹಿತಿ ಸಂಗ್ರಹ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.