ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಮುಂಬೈನಲ್ಲಿ ಸಿಕ್ಕಿಬಿದ್ದ ಪಿಎಸ್‌ಐ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 18:39 IST
Last Updated 30 ಜುಲೈ 2022, 18:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಮಧ್ಯವರ್ತಿಯಾಗಿದ್ದರು ಎನ್ನಲಾದ ಪಿಎಸ್‌ಐ ಶರೀಫ್ ಕಳ್ಳಿಮನಿ ಅವರನ್ನು ಸಿಐಡಿ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ.

‘ಆರೋಪಿ ಶರೀಫ್, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ. ಪಿಎಸ್‌ಐ ಅಕ್ರಮ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಮುಂಬೈಗೆ ಹೋಗಿ ತಲೆಮರೆಸಿಕೊಂಡಿದ್ದ. ವಿಶೇಷ ತಂಡ, ಅಲ್ಲಿಗೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಶರೀಫ್‌ನನ್ನು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರ
ಣೆಗಾಗಿ 10 ದಿನ ಕಸ್ಟಡಿಗೆ ಪಡೆಯ
ಲಾಗಿದೆ’ ಎಂದು ಮೂಲಗಳು ತಿಳಿಸಿವೆ. ‘ಪೊಲೀಸ್ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹರ್ಷನಿಗೆ ಅಭ್ಯರ್ಥಿಗಳನ್ನು ಪರಿಚಯ ಮಾಡಿಕೊಟ್ಟಿದ್ದ ಶರೀಫ್, ಅದಕ್ಕಾಗಿ ಕಮಿಷನ್ ಪಡೆದಿದ್ದನೆಂದು ಗೊತ್ತಾಗಿದೆ’ ಎಂದೂ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.