ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 10:49 IST
Last Updated 27 ಜುಲೈ 2022, 10:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡವು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಐಪಿಎಸ್‌ ಅಧಿಕಾರಿ, ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್‌ ಪೌಲ್‌ ಹೊರತು ಪಡಿಸಿ 36 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. 3,065 ಪುಟಗಳಿದ್ದು, ಪ್ರಕರಣದ ತನಿಖೆಯ ಎಲ್ಲ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

202 ಸಾಕ್ಷಿದಾರರ ಹೇಳಿಕೆ, ಆರೋಪಿಗಳ ವಿರುದ್ಧದ 330 ಸಾಕ್ಷ್ಯ ಹಾಗೂ ದಾಖಲೆಗಳು ಸಹಿತ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ADVERTISEMENT

‘ಮತ್ತಷ್ಟು ಮಾಹಿತಿ ಕಲೆ ಹಾಕಬೇಕಿದ್ದು ಅಮ್ರಿತ್‌ ಪೌಲ್‌ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿಲ್ಲ’ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.