ADVERTISEMENT

PSI ನೇಮಕಾತಿ ಮರುಪರೀಕ್ಷೆ ದಿನಾಂಕ ಶೀಘ್ರದಲ್ಲೇ ಪ್ರಕಟ: ಡಿಜಿಪಿ ಪ್ರವೀಣ್ ಸೂದ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 2:29 IST
Last Updated 19 ಸೆಪ್ಟೆಂಬರ್ 2022, 2:29 IST
ಪ್ರವೀಣ್‌ ಸೂದ್
ಪ್ರವೀಣ್‌ ಸೂದ್   

ಬೆಂಗಳೂರು: ‘ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದರು.

‘ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದ ಕಾರಣಕ್ಕೆ ಸರ್ಕಾರವು ನೇಮಕಾತಿ ಪ್ರಕ್ರಿಯೆ ರದ್ದು ಪಡಿಸಿತ್ತು. 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಕೆಲವು ಅಭ್ಯರ್ಥಿಗಳು ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲರ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಸಲ್ಲಿಕೆ ಆಗಲಿದೆ. ಆರೋಪಿ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆ ಅವಕಾಶ ಸಿಗದಂತೆ ಕ್ರಮ ಕೈಗೊಳ್ಳಬೇಕಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.