ADVERTISEMENT

ಪಿಎಸ್‌ಐ ನೇಮಕಾತಿ ಪ್ರಕರಣ: ತನಿಖೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2023, 9:14 IST
Last Updated 1 ಜೂನ್ 2023, 9:14 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಪ್ರಕರಣದ ಗಂಭೀರ ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಯಾರಿ ನಡೆಸಿದೆ.

ತನಿಖೆಗೆ ಹೈಕೋರ್ಟ್‌ನಲ್ಲಿ ಇರುವ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನ ಆರಂಭಿಸಲಾಗಿದ್ದು, ಈ ಸಂಬಂಧ ಅಡ್ವೋಕೇಟ್ ಜನರಲ್ (ಎಜಿ) ಶಶಿಕಿರಣ್ ಶೆಟ್ಟಿ ಜತೆ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಪರಮೇಶ್ವರ್ ಅವರು ಸೋಮವಾರ ಮತ್ತೊಮ್ಮೆ ಎಜಿ ಜೊತೆ ಮಾತುಕತೆ ನಡೆಸಲಿದ್ದಾರೆ. ಎಜಿ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ADVERTISEMENT

ಇದಿಷ್ಟೇ ಅಲ್ಲದೇ, ಪಿಎಸ್‌ಐ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಪೋಲಿಸ್ ಇಲಾಖೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.

ರೈತರು, ಕನ್ನಡ ಹೋರಾಟಗಾರರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ದಾಖಲಾಗಿರುವ ಪ್ರಕರಣಗಳ ಸಂಬಂಧ ಪ್ರತ್ಯೇಕ ಸಮಿತಿ ಮೂಲಕ ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಸಂಪುಟ ಉಪ ಸಮಿತಿ ರಚಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.