ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಮತ್ತೆ ಮೂರು ದಿನ ಸಿಐಡಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 11:06 IST
Last Updated 13 ಜುಲೈ 2022, 11:06 IST
ಅಮೃತ್ ಪೌಲ್
ಅಮೃತ್ ಪೌಲ್   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿ ಸಿಐಡಿ ವಶದಲ್ಲಿದ್ದ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.

ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿತು.

ಆರೋಪಿ ಶಾಂತಕುಮಾರ ಹಾಗೂ ಎಡಿಜಿಪಿ ಮಧ್ಯೆ ₹ 1.36 ಕೋಟಿ ಹಣ ವರ್ಗಾವಣೆ ಆಗಿದೆ. ಮೊಬೈಲ್ ದತ್ತಾಂಶ ಅಳಿಸಿ ಹಾಕಲಾಗಿದೆ. ಇನ್ನೂ ಐದು ದಿನ ವಶಕ್ಕೆ ನೀಡುವಂತೆ ಸಿಐಡಿ‌ ಪರ ವಕೀಲರು ಕೋರಿದರು.

ನ್ಯಾಯಾಲಯವು ಮೂರು ದಿನ ವಶಕ್ಕೆ ನೀಡಿ ಆದೇಶಿಸಿತು. ಕುಟುಂಬದವರ ಭೇಟಿ ಹಾಗೂ ವೈದ್ಯಕೀಯ ತಪಾಸಣೆಗೂ ಅವಕಾಶ ಕಲ್ಪಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.