ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ವಿಚಾರಣೆಗೆ ಅಮ್ರಿತ್‌ ಪೌಲ್‌ ಅಸಹಕಾರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 18:26 IST
Last Updated 7 ಜುಲೈ 2022, 18:26 IST
ಅಮ್ರಿತ್‌ ಪೌಲ್‌
ಅಮ್ರಿತ್‌ ಪೌಲ್‌   

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇರೆಗೆ ಬಂಧನಕ್ಕೆ ಒಳಗಾಗಿರುವ ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್‌ ಪೌಲ್‌ ಸಿಐಡಿ ತನಿಖೆಗೆ ಅಸಹಕಾರ ತೋರುತ್ತಿದ್ದು, ತನಿಖಾಧಿಕಾರಿಯ ಪ್ರಶ್ನೆಗೆ ನಿರಾಕರಣೆಯೇ ಉತ್ತರವಾಗಿದೆ.

ನಾಲ್ಕು ದಿನಗಳಿಂದ ಸಿಐಡಿ ವಶದಲ್ಲಿರುವ ಪೌಲ್‌, ತನಿಖಾಧಿಕಾರಿಗಳು ಕೇಳಿದ ಪ್ರಶ್ನೆಗೆ ಸಮಯ ಕೇಳುತ್ತಿದ್ದಾರೆ. ‘ತನಗೆ ಆರೋಗ್ಯ ಸರಿಯಿಲ್ಲ’ ಎಂದು ಹೇಳುತ್ತಿದ್ಧಾರೆ ಎಂದು ಮೂಲಗಳು ಹೇಳಿವೆ.

ಬಂಧಿತ ಶಾಂತಕುಮಾರ್‌ ಹೇಳಿಕೆ, ತನಿಖೆಯಲ್ಲಿ ಸಂಗ್ರಹಿಸಿರುವ ದಾಖಲೆ ಆಧಾರದಲ್ಲಿ ಪೌಲ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಚಿಕ್ಕಬಳ್ಳಾಪುರ ವರದಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಬಂಧಿಸಲಾಗಿರುವಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರಿಗೆ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಬಳಿ ಜಮೀನು ಕೊಡಿಸಿದ್ದ ಜಾತವಾರ ಗ್ರಾಮದ ಜಗದೀಶ್ ಅವರನ್ನು ಸಿಐಡಿ ಅಧಿಕಾರಿಗಳ ತಂಡ ಗುರುವಾರ ವಿಚಾರಣೆಗೆ ಒಳಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.