ADVERTISEMENT

ಸಬ್ ಇನ್‌ಸ್ಪೆಕ್ಟರ್‌ ನೇಮಕಾತಿ, ಶೀಘ್ರ ಆದೇಶ ಪತ್ರ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 6:59 IST
Last Updated 22 ಜೂನ್ 2025, 6:59 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಕೊಪ್ಪಳ: ಪಿಎಸ್ಐ ನೇಮಕಾತಿಯಲ್ಲಿ ಹಗರಣ ಆಗಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ನಗರದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬಡ ಜನ ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡಲಾಗುತ್ತಿದೆ ಎಂದರು.

ADVERTISEMENT

ಬಿ.ಆರ್. ಪಾಟೀಲ ಅವರ ಆಡಿಯೊ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ 'ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಣಿ ಅಕ್ರಮದ ಕುರಿತು ಸಚಿವ ಎಚ್.ಕೆ. ಪಾಟೀಲ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಲೂಟಿ ಮಾಡಿದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಚಿವರು ಸಲಹೆ ನೀಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.