ADVERTISEMENT

ಪಿಎಸ್‌ಐ ಅಕ್ರಮ: ಹಗರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆಯೇ? ಗುಂಡೂರಾವ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2022, 12:42 IST
Last Updated 5 ಅಕ್ಟೋಬರ್ 2022, 12:42 IST
ಗುಂಡೂರಾವ್‌
ಗುಂಡೂರಾವ್‌   

ಬೆಂಗಳೂರು:ಪಿಎಸ್‌ಐ ನೇಮಕಾತಿಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪವನ್ನು ದಾಳವಾಗಿ ಬಳಸಿಕೊಂಡಿರುವ ಕಾಂಗ್ರೆಸ್‌ ನಾಯಕದಿನೇಶ್ ಗುಂಡೂರಾವ್ ಅವರುಈ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಶಾಸಕಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ಪ್ರಸ್ತಾಪ ಮಾಡಿ, ಈ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿಯಾಗಿದ್ದು, ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಪ್ರಕರಣದಲ್ಲಿಬಂಧಿತರಾಗಿರುವ ಅಮೃತ್ ಪೌಲ್ಹರಕೆಯ ಕುರಿಯಂತೆ ಭಾಸವಾಗುತ್ತಿದೆ.ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ನ್ಯಾಯಾಂಗ ತನಿಖೆಯಾಗಬೇಕು ಅಥವಾ ಸಿಬಿಐ ತನಿಖೆಯಾಗಬೇಕು ಎಂದು ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ADVERTISEMENT

ಪಿಎಸ್‍ಐ ನೇಮಕಾತಿಯ ಅಧಿಸೂಚನೆ ಪ್ರಕಟವಾಗಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್‍ವೈ ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್‍ವೈ ಪುತ್ರನ (ವಿಜಯೇಂದ್ರ) ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಎಂದಿದ್ದಾರೆ.

ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಆದರೆ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ.? ಎಂದು ಗುಂಡೂರಾವ್‌ ಪ್ರಶ್ನೆ ಮಾಡಿದ್ದಾರೆ.

ಪಿಎಸ್‍ಐ ಹಗರಣ ಬಿಜೆಪಿ ಸರ್ಕಾರದ ಅತಿ ದೊಡ್ಡ ಕಳಂಕ.ಸರ್ಕಾರದ ಭಾಗವಾಗಿರುವವರೇ ಇದರಲ್ಲಿ ಸೇರಿದ್ದಾರೆ. ಆದರೆ ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಸರ್ಕಾರ ಯತ್ನಿಸುತ್ತಿದೆ. ಸರ್ಕಾರ ಪ್ರಾಮಾಣಿಕವಾಗಿದ್ದರೇ, ಪಾರದರ್ಶಕ ತನಿಖೆ ನಡೆಸಲಿ ಎಂದು ಗುಂಡೂರಾವ್‌ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.