ಬೆಂಗಳೂರು: ಪದವಿಪೂರ್ವ ಕಾಲೇಜು ಪ್ರವೇಶ ಪ್ರಕ್ರಿಯೆಯಲ್ಲಿ ಬಾಲಕರು ಮತ್ತು ಬಾಲಕಿಯರಿಗೆ 50:50 ಅನುಪಾತದಲ್ಲಿ ಪ್ರವೇಶಕ್ಕೆ ಅನುಮತಿ ನೀಡುವ ಮಾರ್ಗಸೂಚಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಬದಲಿಸಿದೆ.
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರ ದಲ್ಲಿ ವರ್ಗವಾರು ವಿಂಗಡಣೆಯನ್ನು ಅನುಸರಿಸಿ ದಾಖಲಾತಿ ನೀಡ
ಬೇಕು. ವರ್ಗಾವಾರು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.
50:50 ಸೀಟು ಹಂಚಿಕೆಯ ನಿಯಮ ಅನುಸರಿಸಿದರೆ ವಿದ್ಯಾರ್ಥಿನಿಯ ಬದಲಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಕುಸಿಯುವ ಆತಂಕ ಇತ್ತು. ಏಕೆಂದರೆ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಅಧಿಕ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.