ADVERTISEMENT

5.95 ಲಕ್ಷ ಪಿಯು ವಿದ್ಯಾರ್ಥಿಗಳಿಂದ ಇಂಗ್ಲೀಷ್‌ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 19:30 IST
Last Updated 15 ಜೂನ್ 2020, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ವಿಷಯ ಪರೀಕ್ಷೆ ನಡೆಯಲಿದ್ದು, 1,016 ಪರೀಕ್ಷಾ ಕೇಂದ್ರಗಳಲ್ಲಿ 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ವಸತಿ ನಿಲಯಗಳಲ್ಲಿ ನೆಲೆಸಿ ವ್ಯಾಸಂಗ ಮಾಡಿದ ಹಾಗೂ ವಲಸೆ ಹೋದ 18,524 ವಿದ್ಯಾರ್ಥಿಗಳಿಗೆ ಅವರು ನೆಲೆಸಿರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ.

1,889 ವಿದ್ಯಾರ್ಥಿಗಳು ಹೊರ ರಾಜ್ಯಗಳಿಂದ ಬಂದು ಪರೀಕ್ಷೆ ಬರೆಯಲಿದ್ದು, ಅವರಿಗೆ ಸಹ ಅವರ ಆಯ್ಕೆಯ ಜಿಲ್ಲೆಗಳಲ್ಲೇ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ.

ADVERTISEMENT

ಪ್ರತಿ 200 ವಿದ್ಯಾರ್ಥಿಗಳನ್ನು ಒಂದು ಥರ್ಮಲ್‌ ಸ್ಕ್ಯಾನರ್‌ನಿಂದ ತಪಾಸಣೆಗೆ ಒಳಪಡಿಸಲಾಗುವುದು. ಜ್ವರದ ಲಕ್ಷಣ ಇದ್ದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುವುದು. ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ನೆಲೆಸಿರುವ ಅಥವಾ ಜ್ವರಪೀಡಿತರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ವೇಳೆ ಹೊಸ ಅಭ್ಯರ್ಥಿ ಎಂಬ ನೆಲೆಯಲ್ಲೇ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

‌ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣ ಮಾಡಬಹುದಾಗಿದ್ದು, ಹೆಚ್ಚಿನ ಮಾಹಿತಿಯನ್ನು www.puc.kar.nic.in ವೆಬ್‌ಸೈಟ್‌ನಿಂದ ಪಡೆಯಬಹುದು.

ಮಾರ್ಚ್‌ 23ರಂದು ನಡೆಯಬೇಕಿದ್ದ ಈ ಪರೀಕ್ಷೆಯನ್ನು ಕೊರೊನಾ ಲಾಕ್‌ಡೌನ್‌ ಘೋಷಿಸಿದ್ದರಿಂದಾಗಿ ಮುಂದೂಡಲಾಗಿತ್ತು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.