ADVERTISEMENT

ರಾಜ್ಯದ 1,016 ಕೇಂದ್ರಗಳಲ್ಲಿ ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 18:52 IST
Last Updated 3 ಮಾರ್ಚ್ 2020, 18:52 IST
   
""

ಬೆಂಗಳೂರು: ದ್ವಿತೀಯ ಪಿಯ ಪರೀಕ್ಷೆ ಬುಧವಾರದಿಂದ ಇದೇ 23ರವರೆಗೆ ರಾಜ್ಯದ 1,016 ಕೇಂದ್ರಗಳಲ್ಲಿ ನಡೆಯಲಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

ಎಲ್ಲ ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, ಕೊನೆಯ ಕ್ಷಣದ ಆತಂಕ ನಿವಾರಣೆ ಸಲುವಾಗಿ 1 ಗಂಟೆ ಮೊದಲಾಗಿಯೇ ಪರೀಕ್ಷಾ ಕೇಂದ್ರ ತಲುಪುವ ನಿಟ್ಟಿನಲ್ಲಿ ಸಮಯ ನಿಗದಿಪಡಿಸಿಕೊಂಡಿರಲು ಸಲಹೆ ನೀಡಲಾಗಿದೆ.

ಆತಂಕ ಬೇಡ: ‘ಮುಕ್ತವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ವದಂತಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.