ADVERTISEMENT

ಪಿಯು: ಮೌಲ್ಯಮಾಪನ ಭತ್ಯೆ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 23:30 IST
Last Updated 10 ಜೂನ್ 2025, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ಉಪನ್ಯಾಸಕರಿಗೆ ಸಂಭಾವನೆ ಮತ್ತು ಭತ್ಯೆಗಳನ್ನು ಪಾವತಿಸುವಂತೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎ.ಎಚ್‌. ನಿಂಗೇಗೌಡ, ಪ್ರಧಾನ ಕಾರ್ಯದರ್ಶಿ ಎಸ್‌.ಬಿ. ಮಾಲೀಪಾಟೀಲ ಅವರು, 2025–26ನೇ ಸಾಲಿನ ಬಜೆಟ್‌ನಲ್ಲಿ ಪದವಿಪೂರ್ವ ಪರೀಕ್ಷೆಗಳ ವೆಚ್ಚಕ್ಕಾಗಿಯೇ ₹78 ಕೋಟಿ ಮೀಸಲಿಡಲಾಗಿದೆ. ಈ ಹಣವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಮೇ 12ರಂದೇ ಬಿಡುಗಡೆ ಮಾಡಲಾಗಿದೆ. ಆದರೂ, ಪರೀಕ್ಷೆ–1 ಮತ್ತು ಪರೀಕ್ಷೆ–2ರ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ ಉಪನ್ಯಾಸಕರಿಗೆ ಇದುವರೆಗೂ ಹಣ ಸಂದಾಯವಾಗಿಲ್ಲ ಎಂದು ದೂರಿದ್ದಾರೆ.

ADVERTISEMENT

ವಿಶೇಷ ಜಾಗೃತ ದಳ, ಕಚೇರಿ ಅಧೀಕ್ಷಕರಾಗಿ ಕೆಲಸ ಮಾಡಿದವರಿಗೂ ಸಂಭಾವನೆ ನೀಡಿಲ್ಲ. ತಕ್ಷಣ ಹಣ ಜಮೆ ಮಾಡಲು ಮಂಡಳಿಗೆ ಸೂಚಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.