ADVERTISEMENT

ಬೇಡಿಕೆ ಈಡೇರಿಕೆಗೆ ಒತ್ತಾಯ: ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರು ನಿರ್ಣಯ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 9:09 IST
Last Updated 12 ಮಾರ್ಚ್ 2019, 9:09 IST
   

ಬೆಂಗಳೂರು:‘ದ್ವಿತೀಯ ಪಿಯು ಉತ್ತರ ಪತ್ರಿಕೆ ಮೌಲ್ಯ ಮಾಪನಕ್ಕೆ ಸಾಮೂಹಿಕ ಬಹಿಷ್ಕಾರ ಮಾಡಲಾಗುವುದು’ಎಂದು ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರುನಿರ್ಣಯ ಮಾಡಿದ್ದಾರೆ.

ಪದವಿಪೂರ್ವ ಕಾಲೇಜುಗಳನ್ನು ಮೇ ಮೊದಲ ವಾರದಿಂದ ಆರಂಭಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಈ ಪ್ರತಿಭಟನೆಯನ್ನು ಉಪನ್ಯಾಸಕರು ಹಮ್ಮಿಕೊಂಡಿದ್ದಾರೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇ ಗೌಡ ಮತ್ತು ಬೋಜೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 21ರಿಂದ ಮೌಲ್ಯಮಾಪನ ಶುರುವಾಗಲಿದೆ.ಮಾರ್ಚ್ 20ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ, ಮೌಲ್ಯಮಾಪನವನ್ನು ಬಹಿಷ್ಕರಿಸಿ ಅಹೋರಾತ್ರಿ ಹೋರಾಟ ನಡೆಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಕರು ತಿಳಿಸಿದ್ದಾರೆ.

ADVERTISEMENT

ಇದೇ 1ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗೊಂಡಿದ್ದು, 18ಕ್ಕೆ ಪೂರ್ಣಗೊಳ್ಳಲಿದೆ. ಈ ಬಾರಿ ಒಟ್ಟು6,73,606 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.