ADVERTISEMENT

ಉಪನ್ಯಾಸಕರ ಪ್ರತಿಭಟನೆ ಕಾನೂನು ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 19:41 IST
Last Updated 27 ನವೆಂಬರ್ 2019, 19:41 IST

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪಿಯು ಉಪನ್ಯಾಸಕರು ಗುರುವಾರ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿಡಬೇಕು, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ಅವರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ‘ಈ ಪ್ರತಿಭಟನೆ ಮೌಲ್ಯಮಾಪನ ಬಹಿಷ್ಕಾರದ ಮೊದಲ ಹಂತ ಎಂದು ತಿಳಿಸುವ ಕರಪತ್ರ ಹೊರಡಿಸಲಾಗಿದೆ. ಪರೀಕ್ಷೆಗಳು ಹತ್ತಿರವಾಗುತ್ತಿರುವುದರಿಂದ ಪ್ರತಿಭಟನೆ ಕೈಬಿಡುವಂತೆ ಉಪನ್ಯಾಸಕರಿಗೆ ತಿಳಿಸಬೇಕು’ ಎಂದು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.

‘ಸಮಸ್ಯೆ ಬಗ್ಗೆ ಚರ್ಚಿಸಲುಶಿಕ್ಷಣ ಸಚಿವರು ದಿನಾಂಕ ನಿಗದಿಪಡಿಸಿದ್ದಾರೆ. ಆದರೆ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಅದನ್ನು ಮುಂದೂಡಿದ್ದಾರೆ ಅಷ್ಟೇ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.