ADVERTISEMENT

ದ್ವಿತೀಯ ಪಿಯು ಫಲಿತಾಂಶ 20ಕ್ಕೆ; ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಪ್ರಕಟ

ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 15:54 IST
Last Updated 16 ಜುಲೈ 2021, 15:54 IST
ಪದವಿಪೂರ್ವ ಶಿಕ್ಷಣ ಇಲಾಖೆ
ಪದವಿಪೂರ್ವ ಶಿಕ್ಷಣ ಇಲಾಖೆ   

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಇದೇ 20ರಂದು ಪ್ರಕಟವಾಗಲಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆಯ ಮಾಹಿತಿಯನ್ನು ಶುಕ್ರವಾರದಿಂದಲೇ ರವಾನಿಸಲಾಗುತ್ತಿದೆ.

ಪ್ರತಿ ವರ್ಷ ನಿರ್ದಿಷ್ಟ ನೋಂದಣಿ ಸಂಖ್ಯೆ ಬಳಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಈ ಬಾರಿ ಪರೀಕ್ಷೆ ನಡೆಯದಿರುವ ಕಾರಣ, ನೋಂದಣಿ ಸಂಖ್ಯೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಿಂದ ಪಡೆದುಕೊಂಡು, ಅದರ ಮೂಲಕ ಫಲಿತಾಂಶ ನೋಡಬಹುದು.

https://dpue-exam.karnataka.gov.in/iipu2021 registrationnumber/regnumber ಈ ಲಿಂಕ್ ಬಳಸಿ ನೋಂದಣಿ ಸಂಖ್ಯೆ ಪಡೆಯಬಹುದು.

ADVERTISEMENT

‘ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವ ಮುನ್ನ ನೋಂದಣಿ ಸಂಖ್ಯೆ ಪಡೆಯಬೇಕು. ಈ ಕುರಿತು ಶುಕ್ರವಾರದಿಂದ ವಿದ್ಯಾರ್ಥಿಗಳು ಮತ್ತು ಸಂಬಂಧ‍ಪಟ್ಟ ಕಾಲೇಜುಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ’ ಎಂದು ಇಲಾಖೆಯ ನಿರ್ದೇಶಕಿ ಆರ್. ಸ್ನೇಹಲ್‌ ತಿಳಿಸಿದ್ದಾರೆ.

‘ಈ ಬಾರಿ ಯಾವುದೇ ರ‍್ಯಾಂಕ್ ಇರುವುದಿಲ್ಲ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಅಂಕ ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.