ADVERTISEMENT

ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ: ಸುರೇಶ್ ಕುಮಾರ್ ಇಂಗಿತ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 18:57 IST
Last Updated 21 ಜನವರಿ 2021, 18:57 IST

ಬೆಂಗಳೂರು: 'ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಚಿಂತಿಸಲಾಗುತ್ತಿದೆ’ ಎಂದು ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಮುಕ್ತ ವಿವಿ ಕುಲಪತಿ ಜೊತೆ ಚರ್ಚೆ: ‘2007 ರಿಂದ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಬಿ.ಇಡಿ. ಕಡ್ಡಾಯಗೊಳಿಸಿರುವ ಕಾರಣ, ಹಾಲಿ ಸೇವೆಯಲ್ಲಿರುವ ಉಪನ್ಯಾಸಕರು ಬಿ.ಇಡಿ. ಪಡೆಯಬೇಕಿದೆ. ಅನುದಾನಿತ ಕಾಲೇಜುಗಳಲ್ಲಿರುವ2,357 ಉಪನ್ಯಾಸಕರು ಬಿ.ಇಡಿ., ಪಡೆಯುವುದು ಬಾಕಿ ಇದೆ. ಈ ಎಲ್ಲ ಉಪನ್ಯಾಸಕರು ಏಕಕಾಲದಲ್ಲಿ ಬಿ.ಇಡಿ., ಪಡೆಯಲು ಅನುವಾಗುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಒಂದು ಬಾರಿ ಸೀಟುಗಳ ಸಂಖ್ಯೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಜೊತೆ ಚರ್ಚಿಸಿದ್ದೇನೆ’ ಎಂದರು.

ADVERTISEMENT

ಬಿ.ಇಡಿ., ವಿನಾಯಿತಿ: ವೃತ್ತಿಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಪಿಯು ಉಪನ್ಯಾಸಕರು ನಿವೃತ್ತಿಗೆ ಸಮೀಪದಲ್ಲಿದ್ದಾರೆ. ಅವರ ಅತಿ ಕಡಿಮೆ ಸಂಖ್ಯೆಯಲ್ಲಿರುವುದರಿಂದ ಅವರುಗಳಿಗೆ ಬಿ.ಇಡಿ., ಪದವಿ ಪಡೆಯುವುದರಿಂದ ವಿನಾಯಿತಿ ನೀಡಲು ಮತ್ತು ಕಾಯಂ ಪೂರ್ವ ಸೇವಾ ಅವಧಿ ಘೋಷಣೆ ಮಾಡಲು ಅನುಕೂಲಕರವಾದ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.