ADVERTISEMENT

ಪಿಯು ಪೂರಕ ಪರೀಕ್ಷೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 26 ಜುಲೈ 2018, 19:30 IST
Last Updated 26 ಜುಲೈ 2018, 19:30 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು:ಪದವಿ ಪೂರ್ವ ಶಿಕ್ಷಣ ಇಲಾಖೆ ಜೂನ್‌ನಲ್ಲಿ ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು, ಶೇ 28.30 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 2017ನೇ ಸಾಲಿನ ಪೂರಕ ಪರೀಕ್ಷೆಯಲ್ಲಿ ಶೇ. 26.34 ಫಲಿತಾಂಶ ಬಂದಿತ್ತು.

ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ಕಾಲೇಜುಗಳಲ್ಲಿ ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ. ಪ್ರಸಕ್ತ ಸಾಲಿನಲ್ಲಿ 2,24,879 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಿದ್ದು, 63,652 ಮಂದಿ ತೇರ್ಗಡೆ ಹೊಂದಿದ್ದಾರೆ. ಈ ಪರೀಕ್ಷೆಯಲ್ಲಿಯೂ ಬಾಲಕಿಯರು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮುಂದಿದ್ದಾರೆ.

ಉತ್ತರ ಪತ್ರಿಕೆಯ ಪ್ರತಿ, ಮರುಮೌಲ್ಯಮಾಪನ ಹಾಗು ಮರು ಎಣಿಕೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಕಲು ಪ್ರತಿಗೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ.ಉತ್ತರ ಪತ್ರಿಕೆಯ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 4 ಕೊನೆಯ ದಿನವಾಗಿದೆ.

ADVERTISEMENT

ಮರು ಎಣಿಕೆ, ಮರು ಮೌಲ್ಯಮಾಪನ ಪೂರ್ಣಗೊಂಡ ನಂತರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಕಾಲೇಜುಗಳಿಗೆ ಕಳುಹಿಸಿಕೊಡಲಾಗುವುದು ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.