ಬೆಂಗಳೂರು:ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಆ.21ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು, ಆ.14 ಕೊನೆಯ ದಿನ ಎಂದು ಹೇಳಲಾಗಿತ್ತು.
‘ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿ ಮೇರೆಗೆ ನಾಲ್ಕನೇ ಬಾರಿ ದಿನಾಂಕ ವಿಸ್ತರಿಸಲಾಗಿದೆ. ಯಾವುದೇ ಕಾರಣಕ್ಕೂ ಮತ್ತೆ ದಿನಾಂಕವನ್ನು ಮುಂದೂಡಲಾಗುವುದಿಲ್ಲ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.