ADVERTISEMENT

ಮಧುಕರ್ ಶೆಟ್ಟಿ ಸಾವು: ತನಿಖೆಗೆ ರೈತ ಮುಖಂಡ ಸಿ.ಪುಟ್ಟಸ್ವಾಮಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 11:39 IST
Last Updated 31 ಡಿಸೆಂಬರ್ 2018, 11:39 IST
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಸಿ.ಪುಟ್ಟಸ್ವಾಮಿ ಮಾತನಾಡಿದರು
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಸಿ.ಪುಟ್ಟಸ್ವಾಮಿ ಮಾತನಾಡಿದರು   

ರಾಮನಗರ: ಐಪಿಎಸ್‌ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ರೈತ ಮುಖಂಡ ಸಿ.ಪುಟ್ಟಸ್ವಾಮಿ ಒತ್ತಾಯಿಸಿದರು.

‘ಮಧುಕರ ಶೆಟ್ಟಿ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿದ್ದರು. ಅವರಿಗೆ ಎಚ್1ಎನ್1 ಹೇಗೆ ಬಂದಿದೆ ಎನ್ನುವುದೇ ಅನುಮಾನ. ಸಾವಿನ ನಂತರ ಅವರ ಬಾಯಿಯ ಬಲಭಾಗದಲ್ಲಿ ಮತ್ತು ಮೂಗಿನಲ್ಲಿ ರಕ್ತದ ಕಲೆಗಳು ಕಂಡಿವೆ. ವೈದ್ಯರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ನೀಡುವ ಬದಲು ಎಚ್‌1ಎನ್1 ತಂದು ತಪ್ಪು ಗ್ರಹಿಕೆ ಮಾಡಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ತನಿಖೆ ಆರಂಭಿಸಬೇಕು. ತಜ್ಞ ವೈದ್ಯರು ಹಾಗೂ ಹಿರಿಯ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ಇದಕ್ಕಾಗಿ ನೇಮಿಸಬೇಕು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಹಿತ ಹಲವರು ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಗೃಹ ಸಚಿವರು ಉದಾಸೀನದ ಹೇಳಿಕೆ ನೀಡಿರುವುದು ಸರಿಯಲ್ಲ. ಹೊರ ರಾಜ್ಯದಲ್ಲಿ ಈ ಘಟನೆ ನಡೆದಿರುವ ಕಾರಣ ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಾಕ್ಷ್ಯಗಳು ನಾಶವಾಗುವ ಮುನ್ನಾ ತನಿಖೆ ಆರಂಭಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

ಸಾಮ್ಯತೆ: ‘ದಾರ್ಶನಿಕ ಡಾ.ರಾಮಮನೋಹರ ಲೋಹಿಯಾ ಸಾವಿಗೂ ಮಧುಕರ ಶೆಟ್ಟಿ ಸಾವಿಗೂ ಸಾಮ್ಯತೆ ಇದೆ. ತಪ್ಪು ಚಿಕಿತ್ಸೆಯಿಂದಾಗಿಯೇ ಲೋಹಿಯಾ ಮೃತಪಟ್ಟರು ಎಂದು ನಂತರ ವರದಿ ನೀಡಲಾಯಿತು. ಈಗಲೂ ಆದೇ ರೀತಿ ಆಗಿರುವ ಸಾಧ್ಯತೆ ಇದೆ. ಇದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವ ಸಾಧ್ಯತೆಯೂ ಇದೆ’ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಮುಖಂಡರಾದ ನಂಜಪ್ಪ, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.