ADVERTISEMENT

ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸಲು ನೂಕುನುಗ್ಗಲು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 5:51 IST
Last Updated 7 ಡಿಸೆಂಬರ್ 2021, 5:51 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು.   

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನ ಸೇರಿದ್ದರು.

ಕೋವಿಡ್‌ ಭೀತಿಯ ಕಾರಣದಿಂದ ಸರ್ಕಾರ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಹೇಳಿದೆ. ಆದರೆ, ಮನವಿ ಸಲ್ಲಿಸಲು ಬಂದಿದ್ದ ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಅದೆಲ್ಲವನ್ನೂ ಮರೆತಿದ್ದರು. ಖುದ್ದು ಮುಖ್ಯಮಂತ್ರಿಯವರನ್ನೇ ಭೇಟಿಯಾಗಿ ಮನವಿ ಕೊಡಲು ಸಾಕಷ್ಟು ಜನ ಕಾಯುತ್ತಿದ್ದರು. ಇನ್ನೂ ಕೆಲವರು ಸಿ.ಎಂಆಪ್ತ ಸಹಾಯಕರ ಭೇಟಿಗೆ ಅವಕಾಶ ಸಿಕ್ಕರೆ ಸಾಕು ಎಂದು ಪರದಾಡುತ್ತಿದ್ದ ಚಿತ್ರಣ ಕಂಡುಬಂತು.

ಬೊಮ್ಮಾಯಿ ಅವರು 9.30ಕ್ಕೆ ಮನೆಯಿಂದ ಹೊರಡುತ್ತಾರೆ ಎನ್ನುವ ವಿಷಯ ಮೊದಲೇ ತಿಳಿದಿದ್ದ ಅನೇಕರು ಬೆಳಿಗ್ಗೆ 7 ಗಂಟೆಯಿಂದಲೇ ಮನೆಮುಂದೆ ಜಮಾಯಿಸಿದ್ದರು. ಅನ್ನೂ ಅನೇಕ ಜನ ಅವರ ಮನೆಯ ಹೊರಾಂಗಣದಲ್ಲಿ ಅಂತರ ಮರೆತು ಕಾಯುತ್ತಿದ್ದರು. ನೂಕುನುಗ್ಗಲಿನ ನಡುವೆಯೇ ಮನೆಯಿಂದ ಹೊರಬಂದ ಮುಖ್ಯಮಂತ್ರಿ ಒಂದೆರಡು ನಿಮಿಷಗಳಲ್ಲಿ ಎಲ್ಲರಿಂದ ಮನವಿ ಸ್ವೀಕರಿಸಿ ಹೊರಟು ಹೋದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.