ADVERTISEMENT

ದ್ವಿ-ಭಾಷಾ ಮಾಧ್ಯಮ: ಪ್ರವೇಶ ಮಿತಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 15:46 IST
Last Updated 20 ಜೂನ್ 2025, 15:46 IST
<div class="paragraphs"><p>ಶಾಲೆ</p></div>

ಶಾಲೆ

   

(ಸಾಂಕೇತಿಕ ಚಿತ್ರ)

ಬೆಂಗಳೂರು: ದ್ವಿ-ಭಾಷಾ ಮಾಧ್ಯಮ ಹೊಂದಿರುವ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್‌ ಶಾಲೆಗಳು (ಬಿಪಿಎಸ್) ಮತ್ತು ಪಿಎಂ ಶ್ರೀ ಶಾಲೆಗಳ ಗರಿಷ್ಠ ದಾಖಲಾತಿ ಮಿತಿಯನ್ನು ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ADVERTISEMENT

ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಪ್ರತಿ ತರಗತಿಗೆ ಗರಿಷ್ಠ 40 ಮಕ್ಕಳು, ಪ್ರಾಥಮಿಕ ಶಾಲೆಗಳಲ್ಲಿ (1ರಿಂದ 7ನೇ ತರಗತಿ) ಗರಿಷ್ಠ 50 ಹಾಗೂ ಪ್ರೌಢ ಶಾಲೆಗಳಲ್ಲಿ (8ರಿಂದ 10ನೇ ತರಗತಿ) ಗರಿಷ್ಠ 50 ಮಕ್ಕಳನ್ನು ದಾಖಲಿಸಿಕೊಳ್ಳಬಹುದು. ಈ ಮೊದಲು  ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳ ಗರಿಷ್ಠ ದಾಖಲಾತಿ ಮಿತಿ 30 ವಿದ್ಯಾರ್ಥಿಗಳಿಗೆ ಸೀಮಿತವಾಗಿತ್ತು.

ಪೂರ್ವ ಪ್ರಾಥಮಿಕ ತರಗತಿಯಲ್ಲಿ ಒಬ್ಬ ಶಿಕ್ಷಕರ ಜತೆಗೆ, ಒಬ್ಬ ಸಹಾಯಕಿ ಕಡ್ಡಾಯವಾಗಿ ಇರಬೇಕು. ಶಾಲಾ ಆವರಣದಲ್ಲಿ ಲಭ್ಯವಿರುವ ಕಟ್ಟಡಗಳು, ಸಂಪನ್ಮೂಲಗಳನ್ನು ಬಳಸಿಕೊಂಡು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು, ಶಿಕ್ಷಕರು ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಶ್ರಮಿಸಬೇಕು ಎಂದು ಸೂಚಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.