ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಪ್ರಥಮ ಪಿಯುಸಿ ತರಗತಿಗಳ ಪ್ರವೇಶಕ್ಕೆ ದಾಖಲಾತಿ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯು (ಪದವಿ ಪೂರ್ವ) ಆದೇಶಿಸಿದೆ.
ಈ ತರಗತಿಗಳ ಪ್ರವೇಶಕ್ಕೆ ಕೊನೆಯ ದಿನಾಂಕವನ್ನು ಹಲವು ಬಾರಿ ವಿಸ್ತರಿಸಲಾಗಿತ್ತು. ಆದರೆ ಪ್ರವೇಶಾತಿ ಬಯಸಿ ವಿದ್ಯಾರ್ಥಿಗಳು ಇನ್ನೂ ಬರುತ್ತಿರುವ ಕಾರಣ, ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ದಂಡ ಶುಲ್ಕ ₹670 ಮತ್ತು ವಿಶೇಷ ದಂಡ ಶುಲ್ಕ ₹2,220 ಸೇರಿ ಒಟ್ಟು ₹2,890 ಪಾವತಿಸಿ, ಪ್ರವೇಶ ಪಡೆಯಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.