
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.
ಫೆ.28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ಪರೀಕ್ಷೆಗಳು ಆಯಾ ವಿದ್ಯಾರ್ಥಿಗಳು ಕಲಿಯುತ್ತಿರುವ ವಿದ್ಯಾಸಂಸ್ಥೆಗಳ ಬದಲು ಬೇರೆ ವಿದ್ಯಾಸಂಸ್ಥೆಗಳಲ್ಲಿ ನಡೆಯುತ್ತವೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಕೋರಿದ್ದಾರೆ. ಅದರಂತೆ ಪರೀಕ್ಷೆ ನಡೆಯುವ ದಿನಗಳಂದು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ, ಬಿಎಂಟಿಸಿಯ ಸಾಮಾನ್ಯ ಸೇವಾ ಬಸ್‌ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚುವರಿ ಟ್ರಿಪ್‌ಗಳ ಅಗತ್ಯ ಕಂಡು ಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.