ADVERTISEMENT

ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 19:15 IST
Last Updated 7 ಸೆಪ್ಟೆಂಬರ್ 2022, 19:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಗಳನ್ನು ಅಕ್ಟೋಬರ್‌ ಮೂರನೇ ವಾರದಿಂದ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅನುಮತಿ ನೀಡಿದ್ದಾರೆ ಎಂದುಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ.

ಪರೀಕ್ಷೆಗಳು ಈ ತಿಂಗಳ 19ರಿಂದ ಆರಂಭವಾಗಬೇಕಿತ್ತು. ಪಠ್ಯಗಳು ಪೂರ್ಣಗೊಳ್ಳದ ಕಾರಣ ಪರೀಕ್ಷೆ ಮುಂದೂಡುವಂತೆ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ಎಲ್‌.ಭೋಜೇಗೌಡ, ಶರವಣ ಅವರು ಬುಧವಾರ ಇಲಾಖೆಯ ನಿರ್ದೇಶಕ ರಾಮಚಂದ್ರನ್‌ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಇಲಾಖೆ ಈ ಅನುಮತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT