ಫಲಿತಾಂಶ ಪರಿಶೀಲನೆ
ಸಂಗ್ರಹ ಚಿತ್ರ
ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಇಂದು ಪ್ರಕಟವಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಡಳಿಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.
ಮಧ್ಯಾಹ್ನ 1.30 ಗಂಟೆಯ ನಂತರ https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ಫಲಿತಾಂಶದ ಪ್ರಕಾರ ಒಟ್ಟಾರೆ ಹಾಜರಾದವರ ಪೈಕಿ ಶೇ 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಿರೀಕ್ಷೆಯಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ 77.88 ರಷ್ಟು ಬಾಲಕಿಯರು ತೇರ್ಗಡೆಯಾದರೆ ಶೇ 68.22 ರಷ್ಟು ಬಾಲಕರು ಪಾಸಾಗಿದ್ದಾರೆ.
ಶೇ 69.33 ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಪಾಸಾಗಿದ್ದರೆ ಶೇ 74.55 ರಷ್ಟು ನಗರ ಪ್ರದೇಶದ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಫಲಿತಾಂಶದ ಪ್ರಕಾರ ಉಡುಪಿ ಜಿಲ್ಲೆ ಪ್ರಥಮ ಸ್ಥಾನ (ಶೇ 93.90) ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ (ಶೇ 48.45) ಪಡೆದಿದೆ.
2024–25 ರ ದ್ವಿತೀಯ ಪಿಯು ಪರೀಕ್ಷೆ–1 ಮಾರ್ಚ್ 1 ರಿಂದ ಆರಂಭವಾಗಿ ಮಾರ್ಚ್ 20ಕ್ಕೆ ಅಂತ್ಯವಾಗಿತ್ತು. ರಾಜ್ಯದ 5,050 ಪದವಿಪೂರ್ವ ಕಾಲೇಜುಗಳ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.