ADVERTISEMENT

ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 17:05 IST
Last Updated 7 ಸೆಪ್ಟೆಂಬರ್ 2020, 17:05 IST
ಪರೀಕ್ಷಾ ಕೊಠಡಿಯ ಪ್ರಾತಿನಿಧಿಕ ಚಿತ್ರ
ಪರೀಕ್ಷಾ ಕೊಠಡಿಯ ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಉರ್ದು ಮತ್ತು ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆದವು.

ಸಂಸ್ಕೃತ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 654 ವಿದ್ಯಾರ್ಥಿಗಳಲ್ಲಿ 609 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಉರ್ದು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 353 ವಿದ್ಯಾರ್ಥಿಗಳ ಪೈಕಿ 322 ಮಂದಿ ಪರೀಕ್ಷೆ ಬರೆದಿದ್ದಾರೆ.

‘ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿತರು ಇರಲಿಲ್ಲ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ADVERTISEMENT

‘ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ದಿಢೀರ್ ಆರೋಗ್ಯ ಸಮಸ್ಯೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಕೋವಿಡ್‌ ನಿಯತ್ರಣಕ್ಕಾಗಿ ನಿಯೋಜಿಸಲಾಗಿದ್ದ ಕೆಲವು ಬೋಧಕ, ಬೋಧಕೇತರ ಸಿಬ್ಬಂದಿಯನ್ನು ಇದೀಗ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ’ ಎಂದೂ ಅವರು ತಿಳಿಸಿದರು. ಮಂಗಳ ವಾರ (ಸೆ. 8) ಇತಿಹಾಸ, ಸಂಖ್ಯಾಶಾಸ್ತ್ರ ಮತ್ತು ಜೀವ ವಿಜ್ಞಾನ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.