ADVERTISEMENT

ಪಲ್ಸ್‌ ಪೋಲಿಯೊ: ‌ವಿವಿಧ ಇಲಾಖೆಗಳ ಸಿಬ್ಬಂದಿ ಬಳಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 19:03 IST
Last Updated 10 ಜನವರಿ 2020, 19:03 IST

ಬೆಂಗಳೂರು: ರಾಜ್ಯದಾದ್ಯಂತ ಜ.19ರಂದು ನಡೆಯಲಿರುವ ಪಲ್ಸ್‌ ಪೋಲಿಯೊ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಭಾಗವಹಿಸದಿದ್ದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರು ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕ್ಷೇತ್ರ ಮಟ್ಟದಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಪಲ್ಸ್‌ ಪೋಲಿಯೊ ಕಾರ್ಯಕ್ರಮಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವ ಇಲಾಖೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.

‘ಶೇ 70 ರಷ್ಟು ಆಶಾ ಕಾರ್ಯಕರ್ತೆಯರು ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯಿದೆ.ಅವರ ಮನವೊಲಿಕೆ ಸಾಧ್ಯವಾಗದಿದ್ದಲ್ಲಿಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಸಾಕ್ಷರತಾ ಪ್ರೇರಕರು, ಸಾಮಾಜಿಕ ಕಳಕಳಿಯುಳ್ಳ ನಾಗರಿಕರನ್ನು ತೊಡಗಿಸಲಾಗುವುದು.ಆರೋಗ್ಯ ಇಲಾಖೆಯ ಇತರ ಸಿಬ್ಬಂದಿ ಹಾಗೂ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದ ಭಾಗವಾಗಲಿದ್ದಾರೆ’ ಎಂದು ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.