ADVERTISEMENT

ರಾಜ್ಯದಾದ್ಯಂತ ಜ.17ಕ್ಕೆ ಪಲ್ಸ್‌ ಪೋಲಿಯೊ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 19:31 IST
Last Updated 6 ಜನವರಿ 2021, 19:31 IST
ಮಗುವಿಗೆ ಪೋಲಿಯೊ ಲಸಿಕೆ ಹಾಕುತ್ತಿರುವುದು–ಸಾಂದರ್ಭಿಕ ಚಿತ್ರ
ಮಗುವಿಗೆ ಪೋಲಿಯೊ ಲಸಿಕೆ ಹಾಕುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ ಜ.17ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ 5 ವರ್ಷದೊಳಗಿನ ಮಗುವಿಗೆ ಎರಡು ಹನಿ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೊ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು’ ಎಂದು ಇಲಾಖೆ ಮನವಿ ಮಾಡಿದೆ.

‘ಕೋವಿಡ್ ಕಾರಣಕ್ಕೆ ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ವಿವಿಧ ನಿಯಮಗಳನ್ನು ಅನುಸರಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಪೋಲಿಯೊ ಲಸಿಕೆ ವಿತರಣೆಯ ಹತ್ತಿರದ ಕೇಂದ್ರಗಳ ಮಾಹಿತಿಯು ‘ನಿಯರ್‌ಬಾಯ್ ವ್ಯಾಕ್ಸಿನೇಶನ್ ಸೆಂಟರ್ ಕರ್ನಾಟಕ’ ಮೊಬೈಲ್ ಆ್ಯಪ್‌ನಲ್ಲಿಯೂ ದೊರೆಯಲಿದೆ’ ಎಂದು ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.