ADVERTISEMENT

ಪಲ್ಸ್‌ ಪೋಲಿಯೊ ಲಸಿಕೆ ವಿತರಣೆ ಇಂದು

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 17:16 IST
Last Updated 30 ಜನವರಿ 2021, 17:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪಲ್ಸ್ ಪೋಲಿಯೊ ಲಸಿಕೆ ವಿತರಣೆ ರಾಜ್ಯದಾದ್ಯಂತ ಭಾನುವಾರ ಹಮ್ಮಿಕೊಂಡಿದೆ.

ಈ ಅಭಿಯಾನದಡಿ ಇಲಾಖೆಯು 5 ವರ್ಷದೊಳಗಿನ 64.07 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಲಸಿಕೆ ವಿತರಣೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬೆಳಿಗ್ಗೆ 8 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಲಿದ್ದಾರೆ.

ಲಸಿಕೆ ವಿತರಣೆಗೆ 1,10,179 ಮಂದಿ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. 904 ಮೊಬೈಲ್ ತಂಡವು ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿದೆ. 6,645 ಮೇಲ್ವಿಚಾರಕರ ತಂಡಗಳನ್ನು ರಚಿಸಲಾಗಿದೆ. ಚುನಾವಣೆ ಮತದಾನದ ಮಾದರಿಯ 32,908 ಬೂತ್‌ಗಳನ್ನು ಸಿದ್ಧಪಡಿಸಲಾಗಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.