ADVERTISEMENT

ಪುಲ್ವಾಮಾ ದಾಳಿ ಮಾಹಿತಿ ತಿಳಿಸದಿರುವುದು ಕುಮಾರಸ್ವಾಮಿ ಅಪರಾಧ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಟೀಕೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 15:56 IST
Last Updated 5 ಏಪ್ರಿಲ್ 2019, 15:56 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಶಿಕಾರಿಪುರ: ‘ಪುಲ್ವಾಮಾ ಉಗ್ರರ ದಾಳಿ ಕುರಿತು ಮಾಹಿತಿ ಇದ್ದರೂ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸದಿರುವುದು ಅಪರಾಧವಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಟೀಕಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಪುಲ್ವಾಮ ದಾಳಿ ಕುರಿತು ಎರಡು ವರ್ಷ ಮುಂಚೆ ನನಗೆ ಮಾಹಿತಿ ಇತ್ತು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿಯಾಗಿ ದಾಳಿ ಬಗ್ಗೆ ಗೊತ್ತಿದ್ದರೂ ಸಂಬಂಧಿಸಿದವರಿಗೆ ತಿಳಿಸದೇ ಇರುವುದು ಕ್ರಿಮಿನಲ್‌ ಅಪರಾಧ ಆಗುತ್ತದೆ. ಮಾನ ಮರ್ಯಾದೆ ಇದ್ದವರು ದಾಳಿ ಮಾಹಿತಿ ಮುಚ್ಚಿಡುತ್ತಾರೆಯೇ’ ಎಂದು ಪ್ರಶ್ನಿಸಿದರು.

ADVERTISEMENT

ಐಟಿ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಪಕ್ಷಗಳು ತೆಗಳುತ್ತಿವೆ. ಆದರೆ ಐಟಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ಮಾಡುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.