ADVERTISEMENT

ಪಂಜಾಬ್: ಗೆದ್ದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹ 1000; ಅರವಿಂದ ಕೇಜ್ರಿವಾಲ್‌

ಪಿಟಿಐ
Published 22 ನವೆಂಬರ್ 2021, 12:49 IST
Last Updated 22 ನವೆಂಬರ್ 2021, 12:49 IST
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್   

ಮೊಗಾ,ಪಂಜಾಬ್‌: 2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು (ಎಎಪಿ) ಅಧಿಕಾರಕ್ಕೆ ಬಂದರೆ ಪಂಜಾಬ್‌ನಲ್ಲಿ 18 ವರ್ಷ ಮೀರಿದ ಎಲ್ಲಾ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಪ್ರತಿ ತಿಂಗಳು ₹1,000 ವರ್ಗಾಯಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಭರವಸೆ ನೀಡಿದ್ದಾರೆ.

‘ವೃದ್ಧಾಪ್ಯ ಪಿಂಚಣಿ ಪಡೆಯುತ್ತಿರುವ ಮಹಿಳೆಯರಿಗೂ ಹೆಚ್ಚುವರಿಯಾಗಿ ಈ ಮೊತ್ತ ಸಿಗಲಿದೆ’ ಎಂದು ಎರಡು ದಿನಗಳ ಪಂಜಾಬ್‌ ಪ್ರವಾಸದಲ್ಲಿರುವ ಕೇಜ್ರಿವಾಲ್‌ ಅವರು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಂಜಾಬ್‌ನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ 300 ಯೂನಿಟ್‌ಗಳಷ್ಟು ಉಚಿತ ವಿದ್ಯುತ್‌, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಉಚಿತ ಔಷಧ ನೀಡಲಾಗುವುದು ಎಂದು ಈ ಹಿಂದೆಯೇ ಕೇಜ್ರಿವಾಲ್‌ ಅವರು ಘೋಷಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.