
ಪ್ರಜಾವಾಣಿ ವಾರ್ತೆ
ಬೆಂಗಳೂರು: ಡಾ.ಪು.ತಿ. ನರಸಿಂಹಾಚಾರ್ ಟ್ರಸ್ಟ್ ಕೊಡಮಾಡುವ 2020ನೇ ಸಾಲಿನ ಪ್ರತಿಷ್ಠಿತ ಪು.ತಿ.ನ ಕಾವ್ಯ–ನಾಟಕ ಪುರಸ್ಕಾರಕ್ಕೆ ಕತೆಗಾರ ಎಸ್. ದಿವಾಕರ್ ಅವರ`ಸೋತ ಕಣ್ಣುಗಳನ್ನು ಮಿಟುಕಿಸುವ ಮಧ್ಯಾಹ್ನ’ ಕೃತಿ ಆಯ್ಕೆಯಾಗಿದೆ.
ಈ ಪುರಸ್ಕಾರವು ₹ 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಭಾನುವಾರ (ಡಿ.27) ಬೆಳಿಗ್ಗೆ 10 ಗಂಟೆಗೆ ವರ್ಚುವಲ್ ಮಾದರಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನುಟ್ರಸ್ಟ್ ಹಮ್ಮಿಕೊಂಡಿದೆ. ಟ್ರಸ್ಟ್‌ನ ಅಧ್ಯಕ್ಷ ಹಾಗೂ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಪ‍್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕವಿ ಚಿಂತಾಮಣಿ ಕೊಡ್ಲೆಕೆರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.