ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದಗೌಡ ಅವರು ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಾಜರಿದ್ದರು. ಇಬ್ಬರೂ ಅಭ್ಯರ್ಥಿಗಳು ಇತ್ತೀಚೆಗಷ್ಟೇ ಬಿಜೆಪಿಗೆ ವಲಸೆ ಬಂದಿದ್ದರು. ಶಾಂತಿನಗರದ ಪ್ರಾದೇಶಿಕ ಆಯಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಸಿ.ಟಿ.ರವಿ ಮತ್ತು ಡಾ.ಸುಧಾಕರ್ ಅವರು ಹಾಜರಿದ್ದರು.
ನಾಮಪತ್ರ ಸಲ್ಲಿಕೆಯ ಬಳಿಕ ಪುಟ್ಟಣ್ಣ ಅವರು ಮಾತನಾಡಿ, ‘ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಶಕ್ತಿಶಾಲಿಯಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿರುವುದರಿಂದ ನನ್ನನ್ನು ಪುನರಾಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಎದುರಾಳಿ ಅಭ್ಯರ್ಥಿಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನಾನು ಮಾಡಿರುವ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.