ADVERTISEMENT

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕೊರತೆ: ಗ್ರಾಮೀಣಾಭಿವೃದ್ಧಿ ಇಲಾಖೆ ಸಭೆ ನಾಳೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 1:51 IST
Last Updated 17 ಜನವರಿ 2021, 1:51 IST

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ಸೋಮವಾರ ನಡೆಯಲಿದೆ.

‘ಪ್ರಜಾವಾಣಿ’ ಪತ್ರಿಕೆಯಲ್ಲಿನ ವರದಿ ಗಮನಿಸಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ನನಗೆ ಕರೆ ಮಾಡಿದ್ದಾರೆ. ಸೋಮವಾರ ನಡೆಯುವ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಜಲಜೀವನ್‌ ಮಿಷನ್ ಮತ್ತು ಸ್ವಚ್ಛಭಾರತ್ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ತಿಳಿಸಿದರು.

‘ಈವರೆಗೆ 16 ಶೈಕ್ಷಣಿಕ ಜಿಲ್ಲೆಗಳ ಮಾಹಿತಿ ಸಿಕ್ಕಿದೆ. ಎಷ್ಟು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳ ಕೊರತೆ ಇದೆ ಎಂಬ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಳುಹಿಸಿಕೊಟ್ಟಿದ್ದಾರೆ. ಉಳಿದ ಜಿಲ್ಲೆಗಳ ಮಾಹಿತಿಯನ್ನೂ ತರಿಸಿಕೊಂಡು ಗ್ರಾಮೀಣಾಭಿವೃದ್ಧಿ ಇಲಾಖೆಗೆ ನೀಡಲಾಗುವುದು’ ಎಂದು ಅವರು ಹೇಳಿದರು.

ADVERTISEMENT

‘ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕೊರತೆ’ ಎಂಬ ಶೀರ್ಷಿಕೆಯಡಿಯಲ್ಲಿ ‘ಪ್ರಜಾವಾಣಿ’ಯಲ್ಲಿ ಶನಿವಾರ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.