ADVERTISEMENT

31ರಿಂದ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ: ಸಚಿವ ಬೋಸರಾಜು

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 14:40 IST
Last Updated 29 ಜುಲೈ 2025, 14:40 IST
<div class="paragraphs"><p>ಎನ್.ಎಸ್.ಬೋಸರಾಜು</p></div>

ಎನ್.ಎಸ್.ಬೋಸರಾಜು

   

ಬೆಂಗಳೂರು: ‘ಬೆಂಗಳೂರಿನಲ್ಲಿ ನಡೆಯಲಿರುವ ದೇಶದ ಮೊದಲ ಕ್ವಾಂಟಮ್‌ ವಿಜ್ಞಾನ ಸಮ್ಮೇಳನದಲ್ಲಿ, ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿಯಾಗಲಿದ್ದಾರೆ’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್‌.ಬೋಸರಾಜು ತಿಳಿಸಿದರು.

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನವು ಜುಲೈ 31 ಮತ್ತು ಆಗಸ್ಟ್‌ 1ರಂದು ನಡೆಯಲಿದೆ. ನೊಬೆಲ್‌ ಪುರಸ್ಕೃತ ವಿಜ್ಞಾನಿಗಳಾದ ಪ್ರೊ.ಡಂಕನ್‌ ಹಲ್ದಾನೆ ಮತ್ತು ಪ್ರೊ.ಡೇವಿಡ್‌ ಗ್ರಾಸ್‌ ಭಾಗಿಯಾಗಲಿದ್ದಾರೆ’ ಎಂದರು.

ADVERTISEMENT

‘ಕರ್ನಾಟಕವನ್ನು ಕ್ವಾಂಟಮ್‌ ಕ್ಷೇತ್ರದ ಜಾಗತಿಕ ಕೇಂದ್ರವಾಗಿ ರೂಪಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಇದರ ಭಾಗವಾಗಿ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದಲ್ಲಿ ಭಾಗಿಯಾಗಲಿರುವ ಈ ಇಬ್ಬರು ವಿಜ್ಞಾನಿಗಳ ಜತೆಗೆ ಜುಲೈ 30ರಂದು ಸಮಾಲೋಚನಾ ಸಭೆ ಏರ್ಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.