ADVERTISEMENT

ಚಿಕ್ಕಬಳ್ಳಾಪುರ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 5:25 IST
Last Updated 23 ಫೆಬ್ರುವರಿ 2021, 5:25 IST
ಪ್ರಜಾವಾಣಿ ಸಂಗ್ರಹ ಚಿತ್ರ (ಸತೀಶ ಬಡಿಗೇರ್‌)
ಪ್ರಜಾವಾಣಿ ಸಂಗ್ರಹ ಚಿತ್ರ (ಸತೀಶ ಬಡಿಗೇರ್‌)   

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ‘ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಮೃತಪಟ್ಟಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ’ ಎಂದು ಉಲ್ಲೇಖಿಸಲಾಗಿದೆ.

‘ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಮುಖ್ಯಮಂತ್ರಿಗಳು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.