ADVERTISEMENT

ವಿಧಾನ ಮಂಡಲ ಅಧಿವೇಶನ: ಪ್ರಶ್ನೋತ್ತರ.. ಯಾರು ಏನಂದರು?

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 20:24 IST
Last Updated 20 ಆಗಸ್ಟ್ 2025, 20:24 IST
   

ವಿವಿಧ ಇಲಾಖೆಗಳಲ್ಲಿ ಗೌರವಧನದಡಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನರನ್ನು ಕಾಯಂಗೊಳಿಸುವ ಅಥವಾ ಕನಿಷ್ಠ ವೇತನದ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಇವರಿಗೆ ಈಗಾಗಲೇ ತಿಂಗಳ ಗೌರವಧನದ ಮೊತ್ತವನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 5,601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು,450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172  ವಿವಿಧ ಉದ್ದೇಶ ಪುನರ್ವಸತಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ.

ಲಕ್ಷ್ಮಿ  ಹೆಬ್ಬಾಳಕರ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ (ಪ್ರಶ್ನೆ: ಶ್ರೀವತ್ಸ ಟಿ.ಎಸ್‌, ಬಿಜೆಪಿ)

––––––––––––––––––––––––––

ADVERTISEMENT

ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮತ್ತು ಭವಿಷ್ಯದಲ್ಲಿ ಮೀಸಲಾತಿ ಕೊಡಬೇಕು ಎಂಬ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ಮಾಡಬೇಕು. ಈ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಸೇರಿ ಕಾರ್ಯ ನಿರ್ವಹಿಸಬೇಕು. ರಾಜ್ಯದಲ್ಲಿ 17 ಸಾವಿರ  ಅನಾಥ ಮಕ್ಕಳಿದ್ದಾರೆ. ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳಿವೆ. ಪಿಯು ಶಿಕ್ಷಣದವರೆಗೆ ಮಕ್ಕಳ ಶಾಲಾ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಈ ಮಕ್ಕಳ ಜಾತಿ ಹಿನ್ನೆಲೆ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ಪದವಿ ಶಿಕ್ಷಣಕ್ಕೆ ಪ್ರವೇಶದ ವೇಳೆ ಸಾಮಾನ್ಯ ವರ್ಗದ ಮಗು ಎಂದು ಪರಿಗಣಿಸಿ ದಾಖಲಾತಿ ಮಾಡಲಾಗುತ್ತಿದೆ.

ಲಕ್ಷ್ಮಿ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ (ಪ್ರಶ್ನೆ: ನಯನಾ ಮೋಟಮ್ಮ, ಕಾಂಗ್ರೆಸ್‌)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.