
‘ದೌರ್ಜನ್ಯ ತಡೆಯುವ ಜವಾಬ್ದಾರಿ ಸಾರ್ವಜನಿಕರಿಗೂ ಇದೆ’
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ‘ಅಕ್ಕ ಪಡೆ’ ರಚಿಸಲಾಗಿದೆ. ದಿನದ 12 ಗಂಟೆಯೂ ಈ ಪಡೆ ಗಸ್ತು ತಿರುಗಲಿದೆ. ದೌರ್ಜ್ಯನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು. ಜತೆಗೆ ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಜವಾಬ್ದಾರಿ ಸಾರ್ವಜನಿಕರಿಗೂ ಇದೆ. ದೌರ್ಜನ್ಯವನ್ನು ತಡೆಗಟ್ಟಲು ದಿನದ 24 ಗಂಟೆಯೂ ಸಹಾಯವಾಣಿಗಳನ್ನು ತೆರೆಯಲಾಗಿದೆ.
– ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಪ್ರಶ್ನೆ– ಡಾ.ಭರತ್ ಶೆಟ್ಟಿ, ಬಿಜೆಪಿ
ಸವಳು–ಜವಳು: ಕೇಂದ್ರದಿಂದ ₹4.18 ಕೋಟಿ
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ– ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮದಡಿ ₹4.18 ಕೋಟಿ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ಸದ್ಯವೇ ಬಿಡುಗಡೆ ಆಗಲಿದೆ. ಅಲ್ಲದೇ, ಸವಳು–ಜವಳು ಭೂಮಿ ಅಭಿವೃದ್ಧಿಗೆ ರಾಜ್ಯದ ವತಿಯಿಂದ ಹೆಚ್ಚಿನ ಅನುದಾನವನ್ನು ಮುಂಬರುವ ಬಜೆಟ್‌ನಲ್ಲಿ ನಿಗದಿಪಡಿಸಲಾಗುವುದು.
– ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ
ಪ್ರಶ್ನೆ– ಭರಮಗೌಡ ಅಲಗೌಡ ಕಾಗೆ, ಕಾಂಗ್ರೆಸ್
ತುಳುಭಾಷೆ: ಮುಖ್ಯಮಂತ್ರಿ ಜತೆ ಸಭೆ
ತುಳುಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧ್ಯಕ್ಷತೆಯ ತಂಡ ಆಂಧ್ರ ಪ್ರದೇಶಕ್ಕೆ ಭೇಟಿ ನೀಡಿದೆ. ಆಂಧ್ರದಲ್ಲಿ ಉರ್ದುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಿದ್ದು, ಅದರ ಮಾನದಂಡಗಳ ಕುರಿತು ವರದಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಅವರ ಜತೆ ಸಭೆ ನಡೆಸಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು.
–ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ
ಪ್ರಶ್ನೆ– ಅಶೋಕ್ ಕುಮಾರ್ ರೈ, ಕಾಂಗ್ರೆಸ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.