ನವದೆಹಲಿ: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭರವಸೆ ನೀಡಿದರು.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ಹಿರಿಯೂರಿನ ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಜಲಶಕ್ತಿ ಸಚಿವರನ್ನು ಗುರುವಾರ ಭೇಟಿ ಮಾಡಿದರು. ನಿಯೋಗಕ್ಕೆ ಸಚಿವರು ಈ ಭರವಸೆ ನೀಡಿದರು.
‘ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಿ ₹5,300 ಕೋಟಿ ಅನುದಾನ ನೀಡಲಾಗುವುದು ಎಂದು ಕಳೆದ ಬಜೆಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ, ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಸಹ ಹಣ ನೀಡಿಲ್ಲ. ಇದರಿಂದಾಗಿ, ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ’ ಎಂದು ನಿಯೋಗವು ಸಚಿವರ ಗಮನಕ್ಕೆ ತಂದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.