ADVERTISEMENT

KKRDB ಅಧಿಕಾರಿಗಳೊಂದಿಗೆ ಶೀಘ್ರ ಸಭೆ: ‘ಪ್ರಜಾವಾಣಿ’ ವರದಿಗೆ ನಿರಾಣಿ ಸ್ಪಂದನೆ

‘ಪ್ರಜಾವಾಣಿ’ ವರದಿಗೆ ಸಚಿವ ಮುರುಗೇಶ ನಿರಾಣಿ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 19:33 IST
Last Updated 26 ಜನವರಿ 2023, 19:33 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಲಾದ ಅನುದಾನವನ್ನು ಬಹುತೇಕ ಬಳಕೆ ಮಾಡದಿರುವ ಬಗ್ಗೆ ‘ಪ್ರಜಾವಾಣಿ‘ ವರದಿ ಕಣ್ಣು ತೆರೆಸಿದ್ದು, ಇದರ ಬಗ್ಗೆ ಎರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾಮಗಾರಿ ಚುರುಕುಗೊಳಿಸಲು ಸೂಚಿಸುವೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

‘ಅವಧಿ ಮುಗಿದರೂ ಶುರುವಾಗದ ಕಾಮಗಾರಿಗಳನ್ನು ರದ್ದುಪಡಿಸಿ ಕಡಿಮೆ ಅವಧಿಯ ಟೆಂಡರ್ ಮೂಲಕ ಕೆಲಸ ಪೂರ್ಣ ಮಾಡಲು ಸೂಚಿಸಲಾಗುವುದು. ರಾಜ್ಯ ಸರ್ಕಾರ ಈ ಭಾಗದ ಸಮಗ್ರ ಅಭಿವೃದ್ಧಿಗೆ ವರ್ಷಕ್ಕೆ ನೀಡುವ ₹ 3 ಸಾವಿರ ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಳು ಸೂಚಿಸುವೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಮುಂದಿನ ಆರ್ಥಿಕ ವರ್ಷದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಳಿಗೆ ₹ 5 ಸಾವಿರ ಕೋಟಿ ನೀಡಲು ಉದ್ದೇಶಿಸಿದ್ದಾರೆ. ಅದಕ್ಕಾಗಿ ಈಗಿನಿಂದಲೇ ಕ್ರಿಯಾ ಯೋಜನೆ ರೂಪಿಸಲೂ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.