ಆರ್. ಅಶೋಕ
ಬೆಂಗಳೂರು: ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕೊಪ್ಪಳ ವಿಭಾಗದಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.
93ಕ್ಕೂ ಹೆಚ್ಚು ಕಾಮಗಾರಿಗಳ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ, ಸುಮಾರು ₹62 ಕೋಟಿ ಅವ್ಯವಹಾರ ನಡೆಸಲಾಗಿದೆ. ರಾಜ್ಯ ಸರ್ಕಾರದ ಮತ್ತೊಂದು ಹಗರಣ ಬಯಲಿಗೆ ಬಂದಿದೆ. ಭ್ರಷ್ಟಾಚಾರ, ಅಕ್ರಮ, ಲೂಟಿ ನಡೆಯದ ಇಲಾಖೆಗಳೇ ಇಲ್ಲ ಎನ್ನುವಂತಾಗಿದೆ ಎಂದು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.