ಬೆಂಗಳೂರು: ಭಯೋತ್ಪಾದನೆ ನಿರ್ಮೂಲನೆ ವಿಚಾರದಲ್ಲಿ ಎಐಸಿಸಿ–ಕರ್ನಾಟಕ ಕಾಂಗ್ರೆಸ್ ಭಿನ್ನ ನಿಲುವು ತಳೆದಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿದ್ದರೆ, ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಜಪಿಸುವ ಮೂಲಕ ದೇಶಕ್ಕೆ ಅಪಮಾನ ಮಾಡುತ್ತಿದೆ ಎಂದರು.
ಭಾರತ–ಪಾಕಿಸ್ತಾನ ಯುದ್ಧವಾದರೆ ಮುಸ್ಲಿಮರ ಮತ ಕೈತಪ್ಪಬಹುದು ಎಂಬ ಚಿಂತೆ ಕಾಂಗ್ರೆಸ್ ನಾಯಕರನ್ನು ಕಾಡುತ್ತಿರಬಹುದು. ಪಾಕಿಸ್ತಾನಿ ಪ್ರಜೆಗಳನ್ನು ಎಲ್ಲ ರಾಜ್ಯಗಳು ಹೊರಗೆ ಕಳುಹಿಸುತ್ತಿದ್ದರೆ, ಕರ್ನಾಟಕ ಕಳುಹಿಸಿಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದ ಸಿದ್ದರಾಮಯ್ಯ ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಇದು ರಾಜಕೀಯ ತಂತ್ರಗಾರಿಕೆ ಅಷ್ಟೆ ಎಂದು ದೂರಿದರು.
ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ, ಫಾಜಿಲ್ ಕುಟುಂಬ ಭಾಗಿಯಾಗಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಕೊಲೆ ಘಟನೆ ಕುರಿತು ಸಭಾಧ್ಯಕ್ಷರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಇದೇ ಮೊದಲು. ಇವರೇನು ಗೃಹ ಸಚಿವರಾ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.