ಆರ್.ಅಶೋಕ ಅವರೊಂದಿಗೆ ಚಾಲಕ
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ಪೊಲೀಸ್ ಬೆಂಗಾವಲು ವಾಹನದ ಚಾಲಕ ಶರಣಪ್ಪ (33) ಅವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲಸಿದ್ದರು. ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಶರಣಪ್ಪ ಅವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
‘ಕಲಬುರಗಿ ಜಿಲ್ಲೆಯ ಶರಣಪ್ಪ ಅವರು ಕಳೆದ ಎರಡೂವರೆ ವರ್ಷದಿಂದ ಅಶೋಕ ಅವರ ಬೆಂಗಾವಲು ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಕಾರಣಕ್ಕೆ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.