ADVERTISEMENT

ರಾಹುಲ್‌ ಗಾಂಧಿ ಬಾಗೇಪಲ್ಲಿಗೆ ಬರುವರೇ: ಅಶೋಕ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 16:31 IST
Last Updated 16 ಫೆಬ್ರುವರಿ 2026, 16:31 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಬೆಂಗಳೂರು: ‘ರಾಹುಲ್‌ ಗಾಂಧಿ ಅವರು ಈಗ ಬಾಗೇಪಲ್ಲಿಗೆ ಬಂದು ವೋಟ್‌ ಚೋರಿ, ಎಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿರುವ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮಕ್ಕೆ ಯಾರಾದರೂ ಪಿತಾಮಹ ಇದ್ದರೆ ಅದು ಕಾಂಗ್ರೆಸ್‌ ಪಕ್ಷ ಮತ್ತು ರಾಹುಲ್‌ಗಾಂಧಿ ಅವರ ಪೂರ್ವಜರು. ವೋಟ್‌ ಚೋರಿ ಕಹಾ ಹೈ? ಕಾಂಗ್ರೆಸ್‌ ಪಾರ್ಟಿ ಮೇ ಹೈ’ ಎಂದು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.