
ಬೆಂಗಳೂರು: ‘ರಾಜ್ಯ ಸರ್ಕಾರ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲೂ ಇದೆ ಎಂದು ಪರಮೇಶ್ವರ ಅವರು ಉಡಾಫೆ ಉತ್ತರ ಕೊಟ್ಟಿದ್ದರು’ ಎಂದು ಟೀಕಿಸಿದ್ದಾರೆ.
‘ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹೆಚ್ಚಿ, ಸುಮಾರು ₹390 ಕೋಟಿ ಮೌಲ್ಯದ 192 ಕೆ.ಜಿ ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಇದೀಗ ಬೆಂಗಳೂರಿನ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ₹56 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಮ್ಮಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಮಟ್ಟಹಾಕಲು ಮಹಾರಾಷ್ಟ್ರ ಪೊಲೀಸರು ಬರಬೇಕಾದರೆ ರಾಜ್ಯದ ಪೊಲೀಸ್ ಮತ್ತು ಗುಪ್ತಚರ ಇಲಾಖೆ ಏನು ಮಾಡುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.