ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಮತದಾರರ ಪಟ್ಟಿಯ ಬಗ್ಗೆ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ಆಧಾರರಹಿತ ಎಂಬುದನ್ನು ಚುನಾವಣಾ ಆಯೋಗ ಸ್ಪಷ್ಟವಾಗಿ ವಿವರಿಸಿದೆ. ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಹುಲ್ ಗಾಂಧಿ ಅವರ ಆರೋಪಗಳಲ್ಲಿ ಹುರುಳಿದ್ದರೆ, ಏಳು ದಿನಗಳ ಒಳಗೆ ಚುನಾವಣಾ ಆಯೋಗಕ್ಕೆ ಪುರಾವೆ ಒದಗಿಸಬೇಕು. ಇಲ್ಲದಿದ್ದಲ್ಲಿ ದೇಶದ ಜನರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
‘ಮತಕಳ್ಳತನ ಎಂಬ ನಾಟಕವು ನಿಮ್ಮ ಮೂರ್ಖತನವನ್ನು ಬಯಲು ಮಾಡುತ್ತದೆಯೇ ಹೊರತು ಮತ್ತೇನೂ ಅಲ್ಲ. ನಿಮ್ಮ ಸೋಲಿನ ಹತಾಶೆಯಿಂದ ನಮ್ಮ ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಅಪನಂಬಿಕೆ ಸೃಷ್ಟಿಸುವ ಪಾಪದ ಕೆಲಸ ಮಾಡಬೇಡಿ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.