ADVERTISEMENT

ಸಿಎಂ–ಡಿಸಿಎಂ ಮುಸುಕಿನ ಗುದ್ದಾಟ: ಅಶೋಕ

​ಪ್ರಜಾವಾಣಿ ವಾರ್ತೆ
Published 29 ಮೇ 2025, 16:42 IST
Last Updated 29 ಮೇ 2025, 16:42 IST
<div class="paragraphs"><p>ಆರ್. ಆಶೋಕ, ಸಿದ್ದರಾಮಯ್ಯ</p></div>

ಆರ್. ಆಶೋಕ, ಸಿದ್ದರಾಮಯ್ಯ

   

ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಗಳಿಗೆ ಹತ್ತಿರ ಬರುತ್ತಿದ್ದಂತೆ ಸ್ಫೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದ್ದಾರೆ.

ADVERTISEMENT

ತಮ್ಮ ಅನುಮತಿ ಪಡೆಯದೆ ಮುಖ್ಯ ಎಂಜಿನಿಯರ್‌ಗಳನ್ನು ವರ್ಗಾವಣೆ ಮಾಡಿದ ಡಿಪಿಎಆರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಡಿ.ಕೆ. ಶಿವಕುಮಾರ್‌ ಅವರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಜೊತೆ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅಶೋಕ, ‘ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಯ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ’ ಎಂದಿದ್ದಾರೆ.

‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ’ ಎಂದೂ ಅಶೋಕ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.