ADVERTISEMENT

ಕಾರ್ಯಪಡೆಯ ಗುರಿ ಹಿಂದೂಗಳು: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 16:31 IST
Last Updated 2 ಜೂನ್ 2025, 16:31 IST
<div class="paragraphs"><p> ಆರ್‌. ಅಶೋಕ</p></div>

ಆರ್‌. ಅಶೋಕ

   

ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಪಡೆ’ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಮಗೆ ಬೇಕಾದ ಅಧಿಕಾರಿಗಳನ್ನು ಕಾಂಗ್ರೆಸ್ ಸರ್ಕಾರ ನೇಮಿಸಿಕೊಂಡಿದೆ’ ಎಂದು ದೂರಿದರು.

ADVERTISEMENT

‘ಘಟನೆ ನಡೆದು ಎಷ್ಟೋ ದಿನಗಳ ನಂತರ ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಆರೋಪ ಹೊರಿಸಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಕಾಂಗ್ರೆಸ್‌ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್‌ ನಾಯಕರು ಬದುಕುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರು ಕರಾವಳಿ ಜನರ ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದರು.

ಕಮಲ್‌ ಸಿನಿಮಾಕ್ಕೆ ಅವಕಾಶ ನೀಡಬಾರದು: ‘ನಟ ಕಮಲ್‌ ಹಾಸನ್‌ ಅವರ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತನಾಡಬೇಕು’ ಎಂದು ಅಶೋಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.