ADVERTISEMENT

ಕೇಂದ್ರದಿಂದ 27, 28ರಂದು ಬರ ಅಧ್ಯಯನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 20:11 IST
Last Updated 23 ಫೆಬ್ರುವರಿ 2019, 20:11 IST
ಆರ್‌.ವಿ. ದೇಶಪಾಂಡೆ
ಆರ್‌.ವಿ. ದೇಶಪಾಂಡೆ    

ಬೆಂಗಳೂರು: ಹಿಂಗಾರು ಹಂಗಾಮಿನಲ್ಲಿ ಬರ ಪೀಡಿತವೆಂದು ಘೋಷಿಸಿದ ತಾಲ್ಲೂಕುಗಳ ಅಧ್ಯಯನಕ್ಕೆ ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ನೇತೃತ್ವದ ಒಟ್ಟು 10 ಅಧಿಕಾರಿಗಳ ಮೂರು ತಂಡ ರಾಜ್ಯಕ್ಕೆ ಇದೇ 27 ಮತ್ತು 28ರಂದು ರಾಜ್ಯಕ್ಕೆ ಬರಲಿದೆ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಬರ ಪೀಡಿತ ತಾಲ್ಲೂಕುಗಳಿಗೆ ಭೇಟಿ ನೀಡಿ, ಬೆಳೆ ನಷ್ಟದ ಮಾಹಿತಿ ಪಡೆಯಲಿರುವ ತಂಡದ ಸದಸ್ಯರು, ಮಾರ್ಚ್ 1ರಂದು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎಂದರು.

ಹಿಂಗಾರು ಅವಧಿಯಲ್ಲಿ ರಾಜ್ಯ 156 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ₹ 1,1384.47 ಕೋಟಿ ನಷ್ಟ ಅಂದಾಜಿಸಲಾಗಿದ್ದು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿ ಅನ್ವಯ ₹ 2,064.34 ಕೋಟಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗಿದೆ.

ADVERTISEMENT

ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದ ದೇಶಪಾಂಡೆ, ಮುಂಗಾರು ಅವಧಿಯಲ್ಲಿ ಬರಪೀಡಿತ ತಾಲ್ಲೂಕುಗಳಿಗೆ ಘೋಷಿಸಿದ ₹ 949.49 ಕೋಟಿ ನೆರವಿನ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮತ್ತು ಸಾಧಾರಣ ಬರ ಪೀಡಿತ ಎಂದು ಘೋಷಿಸಿದ 28 ತಾಲ್ಲೂಕುಗಳಿಗೂ ಪರಿಹಾರ ಘೋಷಿಸುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.